ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ನಟಿ ರಾಧಿಕಾ ಪಂಡಿತ್ ಇದೀಗ ಸಿನಿಮಾರಂಗದಿಂದ ಕೊಂಚ ದೂರ ಉಳಿದು ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಸೋಷಿಯಲ್ ಮಿಡಿಯಾದಲ್ಲಿ ಸಕತ್ ಆಕ್ಟಿವ್ ಇರುವ ನಟಿ ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.
ನಟಿ ರಾಧಿಕಾ ಪಂಡಿತ್ ಇದೀಗ ತಮ್ಮ ಮನೆಯ ಗಣೇಶ ಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿ ರಾಧಿಕಾ ಪಂಡಿತ್ ಈ ಬಾರಿ ತಮ್ಮ ಮನೆಯಲ್ಲಿ ಗಣೇಶ ಹಬ್ಬವನ್ನು ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. ಇದೀಗ ಈ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.
ಈ ಬಾರಿಯ ಗಣೇಶ ಹಬ್ಬದ ಸಂಭ್ರಮ ಬಹಳ ವಿಶೇಷ. ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಕಲೆ ಕಟ್ಟುತ್ತಿದೆ. ಎರಡು ವರ್ಷಗಳಿಂದ ಕೋವಿಡ್ ಕಾರಣಗಳಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆಗಾಗಿ ಈ ಬಾರಿಯ ಗಣೇಶ ಹಬ್ಬ ಎಲ್ಲರಿಗೂ ಸಹ ತುಂಬಾ ವಿಶೇಷವಾಗಿತ್ತು.
ಯಶ್ ಹಾಗೂ ರಾಧಿಕಾ ಮಗಳು ಐರಾ ತಮ್ಮ ಯಥರ್ವ್ ಗೆ ಅರಿಶಿಣ ದಾರ ಕಟ್ಟುತ್ತಿರುವ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ.
ನಟಿ ತಮ್ಮ ಮಕ್ಕಳ ಫೋಟೋ ಶೇರ್ ಮಾಡಿಕೊಂಡು, ಎಲ್ಲರೂ ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದೀರಿ ಎಂದು ನಾನು ಭಾವಿಸುತ್ತೇನೆ. ಎಲ್ಲರೂ ಚೆನ್ನಾಗಿ ಮೋದಕ ಕಡುಬು ತಿಂದಿರಾ ಎಂದು ಪ್ರಶ್ನೆ ಮಾಡಿದ್ದರು. ಅಲ್ಲಿ ನೋಡಿ ಗಣೇಶ ಇಲ್ಲಿ ನೋಡು ಗಣೇಶ ಎಂದು ರಾಧಿಕಾ ನಾಡಿನ ಜನರಿಗೆ ಗಣೇಶ ಹಬ್ಬದ ಶುಭ ಕೋರಿದ್ದಾರೆ.
ನಟಿ ರಾಧಿಕಾ ಪಂಡಿತ್ ಯಾವುದೇ ಹಬ್ಬವಾದರೂ ಸಹ ಅದನ್ನು ಸಂಪ್ರದಾಯಿಕವಾಗಿ ಹಾಗೂ ತುಂಬಾ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಇನ್ನು ನಟಿ ಈ ಹಿಂದೆ ವರಮಹಾಲಕ್ಷ್ಮಿ ಹಬ್ಬವನ್ನು ತುಂಬಾ ಅದ್ದೂರಿಯಾಗಿ ಆಚರಿಸಿ ಅದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಇನ್ನು ಇದೀಗ ನಟಿ ತಮ್ಮ ಮನೆಯ ಗಣೇಶ ಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದು, ಸದ್ಯ ಈ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿದೆ. ಇನ್ನು ಈ ಫೋಟೋಗಳಿಗೆ ಅಭಿಮಾನಿಗಳು ಕ್ಯೂಟ್ ಫೋಟೋ ಎಂದು ಕಾಮೆಂಟ್ ಮಾಡುತ್ತಿದ್ದಾರೆ.