ಸ್ಯಾಂಡಲ್ವುಡ್ ಚೆಲುವೆ, ಕಮರ್ಷಿಯಲ್ ಬೆಡಗಿ ನಟಿ ನಿಶ್ವಿಕಾ ನಾಯ್ಡು. ತಮ್ಮ ಅಪ್ರತಿಮಾ ಅಭಿನಯ ಹಾಗೂ ತಮ್ಮ ಗ್ಲಾಮರ್ ನ ಮೂಲಕ ನಟಿ ನಿಶ್ವಿಕಾ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.
ಸ್ಯಾಂಡಲ್ವುಡ್ ನಲ್ಲಿ ಒಂದಾದ ಮೇಲೆ ಒಂದು ಹಿಟ್ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ನಟಿ ನಿಶ್ವಿಕಾ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ.
ನಟಿ ನಿಶ್ವಿಕಾ ಮೂಲತಃ ಬೆಂಗಳೂರಿನವರು, ಚಿಕ್ಕವಯಸ್ಸಿನಿಂದಲೂ ನಟಿಯಾಗಬೇಕೆಂಬ ಕನಸ್ಸನ್ನು ಕಂಡಿದ ನಟಿ ನಿಶ್ವಿಕಾ ನಾಯ್ಡು ಅವರಿಗೆ ಸಿಕ್ಕ ಮೊದಲ ಅವಕಾಶ, ಕನ್ನಡದ ವಾಸು ನಾನ್ ಪಕ್ಕ ಕಮರ್ಷಿಯಲ್.
ಈ ಸಿನಿಮಾದಲ್ಲಿ ನಟ ಅನಿಷ್ ತೇಜಸ್ವರ್ ಅವರಿಗೆ ನಾಯಕಿಯಾಗಿ ಅಭಿನಯಿಸುವ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲೇ ನಟಿ ನಿಶ್ವಿಕಾ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡರು.
ನಂತರ ಚಿರಂಜೀವಿ ಸರ್ಜಾ ಅವರ ಅಮ್ಮ ಐ ಲವ್ ಯು ಸಿನಿಮಾದಲ್ಲಿ ಅವರಿಗೆ ನಾಯಕಿಯಾಗಿ ನಟಿಸಿ, ಚಿತ್ರರಂಗದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡರು.ನಂತರ ಒಂದಾದ ಮೇಲೆ ಒಂದು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿ ಸಿನಿಮಾರಂಗದಲ್ಲಿ ಸಕ್ರಿಯರಾಗಿದ್ದಾರೆ.
ಇನ್ನು ಇದೀಗ ನಟಿ ನಿಶ್ವಿಕಾ ನಾಯ್ಡು ಗುರು ಶಿಶ್ಯರು ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಗುರುಶಿಶ್ಯರು ಸಿನಿಮಾವನ್ನು ಕನ್ನಡದ ಖ್ಯಾತ ನಿರ್ದೇಶಕ ಜಗದೀಶ್ ಕುಮಾರ್ ಹಂಪೆ ಅವರು ನಿರ್ದೇಶನ ಮಾಡಿದ್ದು, ಈ ಸಿನಿಮಾದಲ್ಲಿ ನಟ ಶರಣ್ ಹಾಗೂ ನಟಿ ನಿಶ್ವಿಕಾ ಗೌಡ ನಾಯಕಿಯಾಗಿ ಅಭಿನಯಿಸಿದ್ದಾರೆ.
ಇನ್ನು ಶರಣ್ ಅವರ ಗುರು ಶಿಶ್ಯರು ಸಿನಿಮಾ ಇದೆ ಸೆಪ್ಟೆಂಬರ್ 22 ರಂದು ಬಿಡುಗಡೆಯಾಗುತ್ತಿದ್ದು, ಇದೀಗ ಚಿತ್ರತಂಡ ಸೇರಿದಂತೆ ನಟ ಶರಣ್ ಹಾಗೂ ನಟಿ ನಿಶ್ವಿಕಾ ನಾಯ್ಡು ಸಿನಿಮಾದ ಪ್ರಚಾರ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ಇನ್ನು ಇದೀಗ ಸಿನಿಮಾದ ಪ್ರಚಾರದ ವೇಳೆ ನಟಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ತಾನು ಈ ಸಿನಿಮಾದಲ್ಲಿ ಮೊದಲಬಾರಿಗೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ಅಭಿನಯಿಸುತಿರುವುದಾಗಿ ನಟಿ ಹೇಳಿಕೊಂಡಿದ್ದಾರೆ. ಇನ್ನು ನಟಿಯ ಮತ್ತೊಂದು ಸಿನಿಮಾಗಾಗಿ ಅವರ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.