ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕಬ್ಜ. ಈ ಸಿನಿಮಾದಲ್ಲಿ ಮೊದಲ ಬಾರಿಗೆ ಉಪೇಂದ್ರ ಹಾಗೂ ಸುದೀಪ್ ಒಟ್ಟಾಗಿ ನಟಿಸಿದ್ದು, ಇನ್ನು ಈ ಸಿನಿಮಾ ನೋಡಲು ಅವರ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರೆ ತಪ್ಪಾಗಲಾರದು.
ಕನ್ನಡ ಚಿತ್ರರಂಗದ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ ಕಬ್ಜ ಚಿತ್ರದ ಟೀಸರ್ ಬಿಡುಗಡೆ ದಿನಾಂಕ ಬಿಡುಗಡೆಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹುನಿರೀಕ್ಷಿತ ಸಿನಿಮಾ ಕಬ್ಜ ಟೀಸರ್ ಬಿಡುಗಡೆಯಾಗಲಿದೆ.
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಕೂಡ ಭಾರತದಾದ್ಯಂತ ಮನೆ ಮಾತಾಗಿದೆ. ಈ ಸಿನಿಮಾದ ಟೀಸರ್ ಯಾವಾಗ ಬರುತ್ತದೆ ಎಂದು ಕರ್ನಾಟಕದಲ್ಲಿ ಮಾತ್ರವಲ್ಲದೆ, ದೇಶಾದ್ಯಂತದ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು.
ಇದರ ಸಮಯ ಕೊನೆಗೂ ಈಗ ನಿಗದಿಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಬ್ಜ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಹೆಮ್ಮೆಯ ಕೆಜಿಎಫ್ 2 ಸಿನಿಮಾ ಈಗಾಗಲೇ ಪ್ರಪಂಚದಾದ್ಯಂತ ವಿಜಯ ಪತಾಕೆ ಹಾರಿಸಿದೆ.
ಇನ್ನು ಕನ್ನಡದ ಮತ್ತೊಂದು ಹೆಮ್ಮೆಯ ಚಿತ್ರ ಕಬ್ಜ ಕೂಡ ಗೆಲ್ಲಲೇ ಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗುತ್ತಿರುವ ಕಬ್ಜ ಸಿನಿಮಾ ಗೆದ್ದರೆ, ಕನ್ನಡ ಸಿನಿಮಾರಂಗ ಗೆದ್ದಂತೆ. ಟೀಸರ್ ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಕಾಣಿಸಲಿದ್ದಾರೆ.
ಅಷ್ಟೇ ಅಲ್ಲದೆ ಕರುನಾಡ ಚಕ್ರವರ್ತಿ ಶಿವ ರಾಜ್ ಕುಮಾರ್ ಅವರು ಕೂಡ ಕಬ್ಜ ಸಿನಿಮಾದ ಟೀಸರ್ ನಲ್ಲಿ ಕಾಣಬಹುದು ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಇದೆ. ಕನ್ನಡದ ಅಭಿಮಾನಿಗಳು ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಪ್ರಪಂಚದಾದ್ಯಂತ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.
ಆರ್ ಚಂದ್ರು ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ಈ ಕಬ್ಜ ಸಿನಿಮಾ, ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಕೂಡ ಆರ್ ಚಂದ್ರು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ.