ನಿವೇದಿತಾ ಗೌಡ ಕನ್ನಡ ಕಿರುತೆರೆ ಲೋಕದಲ್ಲಿ ಹಾಗೆ ಸೋಷಿಯಲ್ ಮಿಡಿಯಾದಲ್ಲಿ ಬಹಳ ಸದ್ದು ಮಾಡುತ್ತಿರುವ ಹೆಸರು ಎಂದರೆ ತಪ್ಪಾಗುವುದಿಲ್ಲ. ಕನ್ನಡ ಕಿರುತೆರೆಯ ಹಲವಾರು ಕಾರ್ಯಕ್ರಮಗಳಲ್ಲಿ. ಭಾಗವಹಿಸುವ ಮೂಲಕ ನಿವೇದಿತಾ ಗೌಡ ಕನ್ನಡ ಕಿರುತೆರೆ ಲೋಕದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.
ಕನ್ನಡ ಬಿಗ್ ಬಾಸ್ ಸೀಸನ್ 5ಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ನಿವೇದಿತಾ ಗೌಡ ಇದೀಗ ದೊಡ್ಡ ಸ್ಟಾರ್ ನಟಿಯಾಗಿ ಬೆಳೆದು ನಿಂತಿದ್ದಾರೆ. ಹೋದು ಕಾಮನ್ ಮ್ಯಾನ್ ಆಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು, ತನ್ನ ಮಾತಿನ ಮೂಲಕವೇ ನಿವೇದಿತಾ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.
ಇನ್ನು ನಟಿ ನಿವೇದಿತಾ ಗೌಡ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಚಂದನ್ ಅವರನ್ನು ಭೇಟಿ ಮಾಡಿ, ಅಲ್ಲಿ ಈ ಇಬ್ಬರ ನಡುವೆ ಒಳ್ಳೆಯ ಸ್ನೇಹ ಬೆಳೆಯಿತು. ನಂತರ ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಇಬ್ಬರೂ ಪ್ರೀತಿಸಲು ಶುರು ಮಾಡಿ, ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ಚಂದನ್ ನಿವೇದಿತಾ ಅವರಿಗೆ ವೇದಿಕೆ ಮೇಲೆ ತಮ್ಮ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಕೇಳಿಕೊಂಡಿದ್ದರು.
ಇನ್ನು ಇಬ್ಬರು ಪ್ರೀತಿಸುತ್ತಿರುವುದನ್ನು ಮನೆಯವರೆಲ್ಲ ಒಪ್ಪಿ ನಂತರ ಇಬ್ಬರ ಮದುವೆಯನ್ನು ಮಾಡಲಾಗಿತ್ತು. ಮದುವೆಯ ನಂತರ ಚಂದನ್ ಹಾಗೂ ನಿವೇದಿತಾ ಇಬ್ಬರೂ ಸಖತ್ ಬ್ಯುಸಿಯಾಗಿದ್ದಾರೆ. ಇಬ್ಬರೂ ರಾಜ ರಾಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವೀಕ್ಷಕರನ್ನು ಸಾಕಷ್ಟು ರಂಜಿಸಿದ್ದರು.
ಇನ್ನು ನಿವೇದಿತಾ ಗೌಡ ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲಿ ಸಹ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಇನ್ನು ಕಾರ್ಯಕ್ರಮದಲ್ಲಿ ತಮ್ಮ ಹಾಸ್ಯ ಮಾತುಗಳು ಹಾಗೆ ಡೈಲಾಗ್ ಡಿಲಿವರಿ ಮೂಲಕ ನಿವೇದಿತಾ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುವ ಜೊತೆಗೆ ಕಾರ್ಯಕ್ರಮದ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು.
ಇನ್ನು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆಕ್ಟಿವ್ ಇರುವ ನಟಿ ನಿವೇದಿತಾ ಗೌಡ, ಆಗಾಗ ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ.
ಇದೀಗ ನಟಿ ಮತ್ತೊಂದು ರೀಲ್ಸ್ ಮಾಡಿ, ಅದನ್ನು ತಮ್ಮ ಇನ್ಸ್ಟಾಗ್ರಾಮ್ ಕಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಟಿ ಸಖತ್ ಆಗಿ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳು ಈ ರೀಲ್ಸ್ ಗೆ ಸಾಕಷ್ಟು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..
View this post on Instagram