ನಟ ರಾಕಿಂಗ್ ಸ್ಟಾರ್ ಯಶ್ ಈ ಹೆಸರು ಯಾರು ತಾನೇ ಕೇಳಿಲ್ಲ ಹೇಳಿ. ಇದೀಗ ಯಶ್ ಎನ್ನುವುದು ಕೇವಲ ಒಂದು ಹೆಸರಲ್ಲ. ಇದು ಒಂದು ದೊಡ್ಡ ಬ್ರ್ಯಾಂಡ್ ಆಗಿ ಬಿಟ್ಟಿದೆ ಎಂದರೆ ತಪ್ಪಾಗಲಾರದು. ಕೇವಲ ರಾಜ್ಯಗಳಲ್ಲಿ ಅಲ್ಲ ಇಡೀ ವಿಶ್ವದಾದ್ಯಂತ ಯಶ್ ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.
ಇನ್ನು ನಟ ಯಶ್ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ನಟ ಎನ್ನುವುದು ಎಲ್ಲರಿಗೂ ಸಹ ಗೊತ್ತೇ ಇದೆ. ಇನ್ನು ನಟ ಯಶ್ ಅವರ ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾಗಳ ಬಳಿಕ ಅವರ ಕ್ರೇಜ್ ತುಂಬಾ ದೊಡ್ಡ ಮಟ್ಟಕ್ಕೆ ತಲುಪಿದೆ. ಹಾಗೆ ಯಶ್ ಅವರ ಮುಂದಿನ ಸಿನಿಮಾಗಳ ಬಗ್ಗೆಯೂ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಹುಟ್ಟುಕೊಂಡಿದೆ.
ಇನ್ನು ಯಶ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ನಟನಾಗಿದ್ದಾರೆ, ಇನ್ನು ಯಶ್ ಜೊತೆಗೆ ಸಿನಿಮಾ ಮಾಡಲು ಅವರ ಮನೆಯ ಮುಂದೆ ಸಾಲು ಸಾಲು ನಿರ್ಮಾಪಕರು ಹಾಗೂ ನಿರ್ದೇಶಕರು ಕ್ಯೂನಲ್ಲಿ ನಿಂತಿದ್ದಾರೆ. ಆದರೆ ಯಶ್ ಮಾತ್ರ ತಮ್ಮ ಸಿನಿಮಾಗಳ ಬಗ್ಗೆ ತುಂಬಾ ಪಿಕ್ಕಿಯಾಗಿದ್ದಾರೆ.
ಇನ್ನು ಯಶ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವುದರ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವದಂತಿ ಹರಿದಾಡುತ್ತಿದೆ. ಇನ್ನು ಸಿನಿಮಾದ ಬಗ್ಗೆ ದಿನಕ್ಕೊಂದು ಅಪಡೆಟ್ ಸಿಗುತ್ತಿದ್ದು, ಅವರ ಅಭಿಮಾನಿಗಳು ಯಶ್ ಅವರ ಮುಂದಿನ ಸಿನಿಮಾದ ಘೋಷಣೆಗೆ ಕಾತುರಾಗಿದ್ದಾರೆ.
ನಟ ಯಶ್ ಒಬ್ಬ ಒಳ್ಳೆಯ ನಟ ಮಾತ್ರವಲ್ಲ, ಒಬ್ಬ ಒಳ್ಳೆಯ ಫ್ಯಾಮಿಲಿ ಮ್ಯಾನ್ ಕೂಡ ಹೌದು. ಬಹಳ ವರ್ಷಗಳ ಕಾಲ ಪ್ರೀತಿಸಿ ಮದುವೆಯಾದ ರಾಧಿಕಾ ಹಾಗೂ ಯಶ್ ತಮ್ಮ ಮುದ್ದಾದ ಐರಾ ಹಾಗೂ ಯಥರ್ವ್ ಜೊತೆಗೆ ತುಂಬಾ ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.
ಇನ್ನು ನಟ ಯಶ್ ಸಮಯ ಸಿಕ್ಕಾಗ ಹೆಚ್ಚಿನ ಸಮಯ ತಮ್ಮ ಫ್ಯಾಮಿಲಿ ಜೊತೆಗೆ ಕಳೆಯುತ್ತಾರೆ. ಇನ್ನು ನಟ ಯಶ್ ತಮ್ಮ ಮಕ್ಕಳಾದ ಐರಾ ಮತ್ತು ಯಥರ್ವ್ ಜೊತೆಗೆ ಆಗಾಗ ಸಮಯ ಕಳೆಗುತ್ತಿರುವ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುತ್ತದೆ.
ಇದೀಗ ಐರಾ ಮತ್ತು ಯಶ್ ಆಟವಾಡುತ್ತಿರುವ ಮತ್ತೊಂದು ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು ಈ ವಿಡಿಯೋಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ಕೂಡ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..