ಕರುನಾಡ ಅಭಿನಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿರುವ ನಟ ಕಿಚ್ಚ ಸುದೀಪ್. ನಟ ಸುದೀಪ್ ಹಿರಿತೆರೆ ಹಾಗೂ ಕಿರಿತೆರೆ ಎರಡರಲ್ಲೂ ಸಕ್ರಿಯರಾಗಿರುವ ನಟ. ಕನ್ನಡದ ಜೊತೆಗೆ ಬೇರೆ ಭಾಷೆಗಳಲ್ಲಿ ಸಹ ಅದ್ಭುತವಾಗಿ ಅಭಿನಯಿಸಿ ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದಾರೆ.
ಇನ್ನು ಇತ್ತೀಚೆಗೆ ನಟ ಸುದೀಪ್ ಅವರ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಬಹಳ ಸದ್ದು ಮಾಡಿತ್ತು, ಸುದೀಪ್ ಅವರ ವಿಕ್ರಾಂತ್ ರೋಣ ಸಿನಿಮಾ ಮೊದಲ ದಿನವೇ ಬಾರಿ ಮೊತ್ತದ ಕಲೆಕ್ಷನ್ ಮಾಡಿ ಹೊಸ ಧಾಖಲೆ ಬರೆದಿತ್ತು. ಅಲ್ಲದೆ ಈ ಸಿನಿಮಾಗೆ ಅಭಿಮಾನಿಗಳಿಂದ ಕೂಡ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.
ಇನ್ನು ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂದು ಸಾಕಷ್ಟು ಜನ ಸುದೀಪ್ ಅವರಿಗೆ ಪ್ರಶ್ನೆ ಮಾಡುತ್ತಿದ್ದರು, ಆದರೆ ಈ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿ ದೊರೆಕಿರಲಿಲ್ಲ. ಇನ್ನು ಸದ್ಯ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ.
ಹೌದು ಸದ್ಯ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸೀಸನ್ 9 ರ ನಿರೂಪಣೆಯಲ್ಲಿ ಕಿಚ್ಚ ಸುದೀಪ್ ಬಹಳ ಬ್ಯುಸಿಯಾಗಿದ್ದು, ಬೇರೆ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ ಎನ್ನಲಾಗುತ್ತಿದೆ. ಇನ್ನು ಇತ್ತೀಚೆಗೆ ಕಿಚ್ಚ ಸುದೀಪ್ ತಮ್ಮ ಪತ್ನಿಯ ಜೊತೆಗೆ ಪ್ರವಾಸಕ್ಕೆ ಕೂಡ ತೆರಳಿದ್ದರು.
ಸುದೀಪ್ ಅವರು ತಮ್ಮ ಪತ್ನಿಯ ಜೊತೆಗೆ ಅಸ್ಟ್ರೇಲಿಯಾಗೆ ಪ್ರವಾಸಕ್ಕೆ ತೆರಳಿದ್ದರು, ಈ ಕಾರಣದಿಂದ ಅವರು ಬಿಗ್ ಬಾಸ್ ನ ಈ ವಾರದ ನಿರೂಪಣೆ ಕೂಡ ಮಾಡಲು ಸಾಧ್ಯವಾಗಿರಲಿಲ್ಲ. ಹಾಗೆ ಅಪ್ಪು ಅವರ ಪುನೀತಪರ್ವ ಕಾರ್ಯಕ್ರಮಕ್ಕೂ ಸಹ ಬರಲು ಸಾಧ್ಯವಾಗಿರಲಿಲ್ಲ.
ಇನ್ನು ಸದ್ಯ ಸುದೀಪ್ ಅವರು ಮತ್ತೆ ಭಾರತಕ್ಕೆ ಮರಳಿದ್ದಾರೆ, ಹೌದು ತಮ್ಮ ಪ್ರವಾಸ ಮುಗಿಸಿ ಮತ್ತೆ ಭಾರತಕ್ಕೆ ಹಿಂತಿರುಗಿರುವ ಸುದೀಪ್ ಮತ್ತೆ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸಲು ಮತ್ತೆ ಭಾರತಕ್ಕೆ ಸುದೀಪ್ ಹಿಂತಿರುಗಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಸದ್ಯ ಸುದೀಪ್ ಶೂಟಿಂಗ್ ಸೆಟ್ ನಲಿ ಪೂಜೆ ಮಾಡುತ್ತಿದ್ದು, ಅವರ ಹಿಂದೆ ನಿರ್ದೇಶಕ ತರುಣ್ ಸುಧೀರ್ ನಿಂತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇನ್ನು ಸುದೀಪ್ ತಮ್ಮ ಹೊಸ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಕೆಲವರು ಊಹಿಸಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…