ಚಂದನವನದ ಗೋಲ್ಡನ್ ಕ್ವೀನ್ ಎಂದೆ ಖ್ಯಾತಿ ಪಡೆದಿರುವ ನಟಿ ಅಮೂಲ್ಯ. ನಟಿ ಅಮೂಲ್ಯ ಅಭಿನಯಿಸಿರುವುದು ಕೆಲವೇ ಸಿನಿಮಾಗಳಾದರು ಕನ್ನಡ ಸಿನಿಮಾರಂಗದಲ್ಲಿ ದೊಡ್ಡಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಮದುವೆಯ ನಂತರ ನಟಿ ಅಮೂಲ್ಯ ಚಿತ್ರರಂಗದಿಂದ ಸಂಪೂರ್ಣ ದೂರ ಉಳಿದುಬಿಟ್ಟಿದ್ದಾರೆ.
ಇನ್ನು ನಟಿ ಅಮೂಲ್ಯ ಇತ್ತೀಚಿಗೆ ಮುದ್ದಾದ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದರು. ಇನ್ನು ಈ ವಿಷಯವನ್ನು ಅಮೂಲ್ಯ ಅವರ ಪತಿ ಜಗದೀಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡು ತಮ್ಮ ಸಂತಸ ವ್ಯಕ್ತಪಡಿಸಿದರು. ಇನ್ನು ಇತ್ತೀಚಿಗೆ ನಟಿಯ ಅಮೂಲ್ಯ ತಮ್ಮ ಮುದ್ದು ಅವಳಿ ಮಕ್ಕಳ ಮುಖವನ್ನು ಸಹ ಅಭಿಮಾನಿಗಳ ಎದುರು ರಿವೀಲ್ ಮಾಡಿದ್ದರು.
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಇರುವ ನಟಿ ಅಮೂಲ್ಯ ತಾವು ಗರ್ಭಿಣಿಯಾದಾಗಿನಿಂದ ತಾವು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದವರೆಗೂ ಎಲ್ಲಾ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು.
ಸದ್ಯ ನಟಿ ಅಮೂಲ್ಯ ತಮ್ಮ ಅವಳಿ ಮಕ್ಕಳ ಲಾಲನೆ ಪಾಲನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನು ಆಗಾಗ ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿ ಇರುತ್ತಾರೆ.
ಇನ್ನು ಸದ್ಯ ನಟಿ ಅಮೂಲ್ಯ ಅವರ ಅವಳಿ ಮಕ್ಕಳ ನಾಮಕರಣ ಶಾಸ್ತ್ರವನ್ನು ಅದ್ದೂರಿಯಾಗಿ ಮಾಡಿ ಮುಗಿಸಿದ್ದಾರೆ. ಇನ್ನು ಅವರ ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎನ್ನುವ ಹೆಸರಿಟ್ಟಿದ್ದಾರೆ. ಇನ್ನು ಈ ನಾಮಕರಣ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಕಲಾವಿದರನ್ನು ಅಮೂಲ್ಯ ದಂಪತಿ ಆಹ್ವಾನಿಸಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ, ದರ್ಶನ್ ದಂಪತಿ, ಸೇರಿದಂತೆ ಶಿವಣ್ಣ ಹಾಗೂ ಲವ್ಲಿ ಸ್ಟಾರ್ ಪ್ರೇಮ್ ಕುಟುಂಬ ಇನ್ನು ಅನೇಕ ಮಂದಿ ಈ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದಾರೆ. ಇನ್ನು ಕೆಲವರು ಸೋಷಿಯಲ್ ಮಿಡಿಯಾದ ಮುಖಾಂತರ ಅಮೂಲ್ಯ ಅವರ ಕುಟುಂಬಕ್ಕೆ ಶುಭ ಹಾರೈಸುತ್ತಿದ್ದಾರೆ.
ಸದ್ಯ ನಾಮಕರಣದ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಇನ್ನು ಅಮೂಲ್ಯ ಮಕ್ಕಳ ಹೆಸರನ್ನು ಕೇಳಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..