ರೆಬೆಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಸ್ಯಾಂಡಲ್ವುಡ್ ನ ಭರವಸೆಯ ನಟ ಅಭಿಷೇಕ್ ಅಂಬರೀಶ್ ಅವರಿಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆ. ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ನಟಿ ಸುಮಲತಾ ಅವರ ಏಕೈಕ ಪುತ್ರ ಅಭಿಷೇಕ್ ತಮ್ಮ ಮದುವೆಗೆ ಸಜ್ಜಾಗಿದ್ದಾರೆ ಎನ್ನುವ ಸುದ್ದಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಕಳೆದ ಕೆಲವು ದಿನಗಳಿಂದ ಅಭಿಷೇಕ್ ಅಂಬರೀಶ್ ಅವರ ಮದುವೆ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಅವರು ತಮ್ಮ ಮದುವೆಗೆ ಗ್ರೀನ್ ಸಿಗ್ನಲ್ ಎನ್ನಲಾಗುತ್ತಿದೆ. ಸದ್ಯ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿದೆ.
ಮೂಲಗಳ ಪ್ರಕಾರ ಅಭಿಷೇಕ್ ಅಂಬರೀಶ್ ಅವರು ಮದುವೆಯಾಗುತ್ತಿರುವ ಹುಡುಗಿಯನ್ನು ನೋಡಿ ಒಪ್ಪಿದ್ದು, ಅವರ ನಿಶ್ಚಿತಾರ್ಥ ದಿನಾಂಕ ಕೂಡ ಫಿಕ್ಸ್ ಆಗಿದೆ ಎನ್ನಲಾಗುತ್ತದೆ. ಹಾಗಾದರೆ ಹುಡುಗಿ ಯಾರು ಅವರ ಮೂಲ ಏನು ಎನ್ನುವುದನ್ನು ತಿಳಿಸುತ್ತೇವೆ ಈ ಪುಟವನ್ನು ಸಂಪೂರ್ಣವಾಗಿ ಓದಿ…
ಅಭಿಷೇಕ್ ಅಂಬರೀಶ್ ಅವರು ಸದ್ಯ ತಮ್ಮ ಸಿನಿಮಾ ಕೆಲಸಗಳಲ್ಲಿ ತುಂಬಾ ಬ್ಯುಸಿಯಾಗಿದ್ದಾರೆ. ಅಲ್ಲದೆ ಅಭಿಷೇಕ್ ಅಂಬರೀಶ್ ಅವರ ಮದುವೆ ಆಗುತ್ತಿರುವ ಹುಡುಗಿಯನ್ನು ಸ್ವತಹ ಸುಮಲತಾ ಅವರೇ ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತದೆ. ಇನ್ನು ಅಮ್ಮ ನೋಡಿದ ಹುಡುಗಿಯನ್ನೇ ಅಭಿಷೇಕ್ ಮದುವೆಯಾಗುತ್ತಿದ್ದಾರಂತೆ.
ಅಭಿಷೇಕ್ ಅಂಬರೀಶ್ ಅವರ ಮದುವೆಯನ್ನು ತುಂಬಾ ಗೌಪ್ಯವಾಗಿ ನಡೆಸುತ್ತಿದ್ದು, ಬಗ್ಗೆ ಅಭಿಷೇಕ್ ಅಂಬರೀಶ್ ಆಗಲಿ ಅಥವಾ ನಟಿ ಸುಮಲತಾ ಆಗಲಿ ಎಲ್ಲಿಯೂ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಆದರೂ ಸಹ ಹೇಗೋ ಈ ವಿಷಯ ಹೊರ ಬಿದ್ದಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ.
ಇನ್ನು ಅಭಿಷೇಕ್ ಅಂಬರೀಶ್ ಅವರ ಮದುವೆ ಎಂದು ತಿಳಿದಂತೆ ಹುಡುಗಿ ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಯಂಗ್ ರೆಬಲ್ ಸ್ಟಾರ್ ಅವರ ಪತ್ನಿಯಾಗಿ ಯಾರು ಬರಬಹುದು ಎಂದು ಅಭಿಮಾನಿಗಳು ಯೋಚಿಸುತ್ತಿದ್ದಾರೆ. ಇನ್ನು ಅಭಿಷೇಕ್ ಮದುವೆಯಾಗುತ್ತಿರುವ ಹುಡುಗಿ ಖ್ಯಾತ ಮಾಡೆಲ್ ಎನ್ನಲಾಗುತ್ತಿದೆ.
ಇನ್ನು ಮುಂದಿನ ತಿಂಗಳು ಡಿಸೆಂಬರ್ ನಲ್ಲಿ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಶಾಸ್ತ್ರ ಮಾಡಲು ನಿರ್ಧರಿಸಿದ್ದರಂತೆ. ಇನ್ನು ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಈಗಾಗಲೇ ಶುರು ಮಾಡಲಾಗಿದೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ…