ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಅವರ ಬಗ್ಗೆ ದಿನಕ್ಕೊಂದು ಸುದ್ದಿ ಸದ್ದು ಮಾಡುತ್ತಿದೆ. ಕಳೆದ ಕೆಲವು ದಿನಗಳಿಂದ ನಟ ಅಭಿಷೇಕ್ ಅಂಬರೀಶ್ ಅವರ ಮದುವೆ ವಿಚಾರ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿತ್ತು, ಅದಾದ ಅಂತರ ಅವರು ಮದುವೆಯಾಗುವ ಹುಡುಗಿಯ ಬಗ್ಗೆ ಮಾತುಗಳು ಕೇಳಿ ಬಂದಿತ್ತು.
ಇನ್ನು ಇತ್ತೀಚೆಗೆ ನಟ ಅಭಿಷೇಕ್ ಅಂಬರೀಶ್ ಅವರು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಮಗಳು ಅವಿವಾ ಬಿದ್ದಪ್ಪ ಅವರನ್ನು ಮದುವೆಯಾಗುತಿದ್ದಾರೆ ಎನ್ನುವ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಬಹಳ ಸದ್ದು ಮಾಡಿತ್ತು. ಈ ವಿಷಯ ಹೊರಬಂದ ಕೆಲವೇ ದಿನಗಳಲ್ಲಿ ಮತ್ತೊಂದು ವಿಷಯದ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು.
ಹೌದು ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಇಬ್ಬರೂ ಸುಮಾರು 5 ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದಾರೆ ಎನ್ನುವ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆಯಾಗಿತ್ತು. ಅವಿವಾ ಬಿದ್ದಪ್ಪ ಹಾಗೂ ನಟ ಅಭಿಷೇಕ್ ಅಂಬರೀಶ್ ಇಬ್ಬರೂ ವಿದೇಶದಲ್ಲಿ,
ಭೇಟಿಯಾಗಿದ್ದರು, ಭೇಟಿಯಾದ ಕೆಲವೇ ದಿನಗಳಲ್ಲಿ, ನಂತರ ಇವರ ಪರಿಚಯ ಪ್ರೀತಿಗೆ ತಿರುಗಿ ಇದೀಗ ಈ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಇನ್ನು ತಮ್ಮ ಪೋಷಕರನ್ನು ಒಪ್ಪಿಸಿದ ಅವಿವಾ ಹಾಗೂ ನಟ ಅಭಿಷೇಕ್ ಅಂಬರೀಶ್ ಇತ್ತೀಚೆಗೆ ಕಳೆದ ಭಾನುವಾರ ಬೆಂಗಳೂರಿನ ಕಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ,
ನಿಶ್ಚಿತಾರ್ಥ ಶಾಸ್ತ್ರ ಮಾಡಿಕೊಂಡಿದ್ದಾರೆ. ಇನ್ನು ಈ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಕಲಾವಿದರು ಭಾಗಿಯಾಗಿ, ಈ ನವ ಜೋಡಿಗೆ ಶುಭಾಶಯಗಳನ್ನು ತಿಳಿಸಿದ್ದರು. ಇನ್ನು ಅಭಿಮಾನಿಗಳು ಸಹ ಈ ಜೋಡಿಗೆ ಸೋಶಿಯಲ್ ಮೀಡಿಯಾದ ಮುಖಾಂತರ ಶುಭ ಕೋರಿದ್ದರು.
ಸದ್ಯ ಇದೀಗ ನಟ ಅಭಿಷೇಕ್ ಅಂಬರೀಶ್ ಅವರ ತಾಯಿ ನಟಿ ಸುಮಲತಾ ಅವರು ತಮ್ಮ ಭಾವಿ ಸೊಸೆಯ ಬಗ್ಗೆ ಮಾತನಾಡಿದ್ದಾರೆ. ಸದ್ಯ ಈ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. ನಮ್ಮ ಮನೆಯಲ್ಲಿ ಈ ಮೊದಲೇ A ಅಕ್ಷರದಿಂದ ಇಬ್ಬರೂ ಇದ್ದಾರೆ.
ಇದೀಗ ನಮ್ಮ ಮುದ್ದಾದ ಕುಟುಂಬಕ್ಕೆ ಮತ್ತೊಂದು A ಹೆಸರು ಸೇರ್ಪಡೆಯಾಗುತ್ತದೆ. ನಮ್ಮ ಮುದ್ದಾದ ಕುಟುಂಬಕ್ಕೆ ನಿನಗೆ ಸ್ವಾಗತ ಅವಿವಾ ಎಂದು ಬರೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಳನ್ನು ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..