ಕನ್ನಡ ಚಿತ್ರರಂಗದ ಟಾಪ್ ನಟ ಡಿ ಬಾಸ್ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದ್ದಾರೆ. ಈ ಇಬ್ಬರೂ ಮತ್ತೆ ಒಂದಾಗುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಈ ಇಬ್ಬರೂ ಸ್ಟಾರ್ ನಟರ ಅಭಿಮಾನಿಗಳು ಕಾದು ಕುಳಿತಿದ್ದಾರೆ.
ದರ್ಶನ್ ಅವರು ಇತ್ತೀಚೆಗೆ ತಮ್ಮ ಕ್ರಾಂತಿ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲು ತಮ್ಮ ಚಿತ್ರತಂಡದ ಜೊತೆಗೆ ಹೊಸಪೇಟೆಗೆ ಹೋಗಿದ್ದರು. ಆದರೆ ಅಲ್ಲಿ ಯಾರೋ ಕಿಡಿಗೇಡಿ ಒಬ್ಬ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದು ಅವರ ಮೇಲೆ ಹ’ಲ್ಲೆ ಮಾಡಿದ್ದರು. ಸದ್ಯ ಕೆಲವು ದಿನಗಳಿಂದ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿದೆ.
ಇನ್ನು ಚಂದನವನದ ಅನೇಕ ಸ್ಟಾರ್ ಕಲಾವಿದರು ಈ ವಿಷಯದ ಬಗ್ಗೆ ಸಾಕಷ್ಟು ಅಭಿಪ್ರಾಯಗಳನ್ನು ತಮ್ಮ ಸೋಶಿಯಲ್ ಮೀಡಿಯಾದ ಮುಖಾಂತರ ವ್ಯಕ್ತ ಪಡಿಸುತ್ತಿದ್ದಾರೆ. ಅಲ್ಲದೆ ಎಲ್ಲಾ ಸ್ಟಾರ್ ನಟರು ನಟ ದರ್ಶನ್ ಪರವಾಗಿ ನಿಂತು, ಡಿ ಬಾಸ್ ನಿಮಗೆ ನಾವಿದ್ದೇವೆ ಎಂದು ಅವರಿಗೆ ಬೆಂಬಲ ನೀಡುತ್ತಿದ್ದಾರೆ.
ಇನ್ನು ದರ್ಶನ್ ಅವರ ಮೇಲೆ ನಡೆದ ಹಲ್ಲೆಯ ಕುರಿತು ನಟ ಕಿಚ್ಚ ಸುದೀಪ್ ಅವರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತಿದರು. ಹೌದು ಒಂದು ಸುದೀರ್ಘ ಪಾತ್ರವನ್ನು ಬರೆದು ಅದನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ನಟ ಕಿಚ್ಚ ಸುದೀಪ್ ಅವರು ನಟ ಡಿ ಬಾಸ್ ದರ್ಶನ್ ಅವರಿಗೆ ಬೆಂಬಲ ನೀಡಿದ್ದರು.
ಇನ್ನು ಸುದೀಪ್ ಅವರು ದರ್ಶನ್ ಅವರ ಪರವಾಗಿ ಮಾತನಾಡಿರುವುದನ್ನು ಕೇಳಿ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳು ಬಹಳ ಖುಷಿ ಪಟ್ಟಿದ್ದರು. ಅಷ್ಟೇ ಅಲ್ಲದೆ ದರ್ಶನ್ ಹಾಗೂ ಸುದೀಪ್ ಇಬ್ಬರೂ ಒಂದಾಗಬೇಕು, ಚಂದನವನ ಮತ್ತೆ ಮೊದಲಿನಂತೆ ಬೆಳಗಬೇಕು ಎಂದು ಸಾಕಷ್ಟು ಅಭಿಮಾನಿಗಳು ಆಶಿಸಿದ್ದರು.
ಒಂದು ಕಾಲದ ಕುಚಿಕು ಗೆಳೆಯ ತನ್ನ ಪರವಾಗಿ ನಿಂತು ತನ್ನ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದಕ್ಕೆ ನಟ ದರ್ಶನ್ ಅವರು ಕೂಡ ತುಂಬಾ ಖುಷಿ ಪಟ್ಟು, ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ವಿಷಯ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳಿಗೆ ತುಂಬಾ ಖುಷಿ ತಂದುಕೊಟ್ಟಿದೆ. ಇನ್ನು ಇದೀಗ ಈ ಇಬ್ಬರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ.
ಹೌದು ದರ್ಶನ್ ಅವರ ಕ್ರಾಂತಿ ಸಿನಿಮಾದ ಟ್ರೇಲರ್ ಬಿಡುಗಡೆಗೆ ಇದೀಗ ನಟ ಕಿಚ್ಚ ಸುದೀಪ್ ಅವರು ಆಗಮಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಸುದೀಪ್ ಅವರನ್ನು ಚಿತ್ರತಂಡ ಸಂಪರ್ಕಿಸಿದ್ದು, ಸುದೀಪ್ ಅವರು ಬರುತ್ತಾರೆ ಎನ್ನುವ ಸುದ್ದಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಅಭಿಮಾನಿಗಳ ವರ್ಷಗಳ ನಿರೀಕ್ಷೆ ಇದೀಗ ಫಲ ಕೊಡುತ್ತೀದೆ ಎನ್ನಬಹುದು. ಇನ್ನು ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..