ಟಾಲಿವುಡ್ ಹಾಗೂ ಕಾಲಿವುಡ್ ನಲ್ಲಿ ಸದ್ಯ ತನ್ನ ಅದ್ಭುತ ನಟನೆ ಹಾಗೂ ತನ್ನ ಮುದ್ದು ಮುಖದ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ನಟಿ ಎಂದರೆ ಅದು ನಟಿ ಕೀರ್ತಿ ಸುರೇಶ್. ನಟಿ ಕೀರ್ತಿ ಸುರೇಶ್ ತೆಲುಗು ಹಾಗೂ ತಮಿಳು ಮಾತ್ರವಲ್ಲದೆ ಮಲಯಾಳಂ ಭಾಷೆಯಲ್ಲಿ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದ್ದಾರೆ.
ನಟಿ ಕೀರ್ತಿ ಸುರೇಶ್ ಅವರ ಮಹಾನಟಿ ಸಿನಿಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಿರಿಯ ನಟಿ ಸಾವಿತ್ರಿ ಅವರ ಪಾತ್ರದಲ್ಲಿ ನಟಿ ಕೀರ್ತಿ ಸುರೇಶ್ ಮಹಾನಟಿ ಸಿನಿಮಾದಲ್ಲಿ ಮೋಡಿ ಮಾಡಿದ್ದರು. ಇನ್ನು ಈ ಸಿನಿಮಾದಲ್ಲಿನ ಅವರ ನಟನೆ ಕಂಡು ಇಡೀ ದಕ್ಷಿಣ ಭಾರತ ಸಿನಿಮಾರಂಗ ಅವರಿಗೆ ಮೆಚ್ಚುಗೆ ಸೂಚಿಸಿತ್ತು.
ಇನ್ನು ಈ ಸಿನಿಮಾದ ನಂತರ ನಟಿ ಕೀರ್ತಿ ಸುರೇಶ್ ಅವರ ಕ್ರೇಜ್ ಸಿನಿಮಾರಂಗದಲ್ಲಿ ಇನ್ನಷ್ಟು ಹೆಚ್ಚಾಯಿತು ಎಂದರೆ ತಪ್ಪಾಗುವುದಿಲ್ಲ. ಹೌದು ನಟಿ ಕೀರ್ತಿ ಸುರೇಶ್ ಅವರಿಗೆ ಮಹಾನಟಿ ಸಿನಿಮಾಗಾಗಿ ನ್ಯಾಷನಲ್ ಅವಾರ್ಡ್ ಕೂಡ ಲಭಿಸಿತ್ತು. ಇನ್ನು ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆದ ಬಳಿಕ ಅವರಿಗೆ ಸಾಲು ಸಾಲು ಸಿನಿಮಾಗಳ ಆಫರ್ ಬರಲು ಶುರುವಾಯಿತು.
ಆದರೆ ಈ ಸಿನಿಮಾದ ರೀತಿ ಅವರ ಮತ್ತೆ ಯಾವುದೇ ಸಿನಿಮಾ ಕೈ ಹಿಡಿಯಲಿಲ್ಲ. ಇನ್ನು ಇತ್ತೀಚೆಗೆ ಟಾಲಿವುಡ್ ನ ಪ್ರಿನ್ಸ್ ಮಹೇಶ್ ಬಾಬು ಅವರ ಸರ್ಕಾರು ವಾರಿ ಪಾಟ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ನಟಿಸಿದ್ದರು. ಇನ್ನು ಈ ಸಿನಿಮಾ ಸಹ ಸೂಪರ್ ಹಿಟ್ ಸಾಬೀತಾಯಿತು. ಇನ್ನು ಇದೀಗ ನಟಿ ಕೀರ್ತಿ ಸುರೇಶ್ ತೆಲುಗು, ತಮಿಳು ಹಾಗೆ ಮಲಯಾಳಂನ ಕೆಲವು
ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಸದ್ಯ ಚಿತ್ರರಂಗದಲ್ಲಿ ಸಕತ್ ಬ್ಯುಸಿಯಾಗಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸಕತ್ ಆಕ್ಟಿವ್ ಇರುವ ನಟಿ ಕೀರ್ತಿ ಸುರೇಶ್ ಆಗಾಗ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿರುತ್ತಾರೆ. ಇನ್ನು ಇದೀಗ ನಟಿ ಕೀರ್ತಿ ಸುರೇಶ್ ತಾವು ಯೋಗ ಮಾಡುತ್ತಿರುವ ವಿಡಿಯೋ ಒಂದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಟಿ ಕೀರ್ತಿ ಸುರೇಶ್ ಅವರ ಈ ಯೋಗ ವಿಡಿಯೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಇನ್ನು ಈ ವಿಡಿಯೋದಲ್ಲಿ ನಟಿ ಕೀರ್ತಿ ಸುರೇಶ್ ಅವರು ಯೋಗ ಮ್ಯಾಟ್ ನ ಮೇಲೆ ಕೆಲವು ಹಾಸನಗಳನ್ನು ಮಾಡಿ ತೋರಿಸಿದ್ದಾರೆ. ಇನ್ನು ಈ ವೇಳೆ ಅವರ ಸಹಜ ಸೌಂದರ್ಯಕ್ಕೆ ಪಡ್ಡೆ ಹುಡುಗರು ಮಾರಿ ಹೋಗಿದ್ದಾರೆ.
ಇನ್ನು ಈ ವಿಡಿಯೋಗೆ ಸಾಕಷ್ಟು ಲೈಕ್ಸ್ ಹಾಗೂ ಕಾಮೆಂಟ್ಸ್ ಗಳಿ ಹರಿದು ಬರುತ್ತಿದ್ದು, ಇನ್ನು ನೀವು ಸೂಪರ್ ಬ್ಯೂಟಿ ಎಂದು ಕೆಲ ಪಡ್ಡೆ ಹುಡುಗರು ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ..