ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. 3ಡಿಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಇದರ ಮಧ್ಯೆ ಸಿನಿಮಾ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವುದು ಅಭಿಮಾನಿ ವಲಯಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಚಿತ್ರದ ಕಲೆಕ್ಷನ್ಗೆ ಹೊಡೆತ ಬೀಳಬಹುದು ಎಂದು ಹೇಳಲಾಗುತ್ತಿದೆ. ಈ ಕುರಿತು ನಟ ಸುದೀಪ್ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ.
ನನ್ನ ಸಾಮರ್ಥ್ಯ ಏನೆಂದು ನನಗೆ ಗೊತ್ತಿದೆ, ನನ್ನ ಮೇಲೆ ನನಗೆ ನಂಬಿಕೆ ಇದೆ. ಸಿನಿಮಾದ ಕುರಿತು ಹಣ ಪಡೆದು ಅಪಪ್ರಚಾರ ಮಾಡುತ್ತಿದ್ದಾರೆ, ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಬಗ್ಗೆ ನನಗೆ ಗೊತ್ತಿದೆ. ಅವರ ದೌರ್ಬಲ್ಯ ಕುರಿತು ನಾನೇಕೆ ಚಿಂತಿಸಲಿ. ನನ್ನನ್ನು ಪ್ರೀತಿಸುವ ಜನರೇ ನನ್ನ ಶಕ್ತಿ ಎಂದಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’. ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಔಟ್ ಅಂಡ್ ಔಟ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಇದರಲ್ಲಿರುವ ವಿಶುವಲ್ ಎಫೆಕ್ಟ್ಸ್, ಸೆಟ್ ಮತ್ತು ಕ್ಯಾಮರಾ ವರ್ಕ್ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ.
ಎಲ್ಲೆಡೆ ‘ವಿಕ್ರಾಂತ್ ರೋಣ’ ಸಿನಿಮಾಗೆ ಭರ್ಜರಿ ಓಪನ್ನಿಂಗ್ ಸಿಕ್ಕಿದೆ. ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಸಿಗುತ್ತಿರುವ ಭರಪೂರ ಸ್ವಾಗತವನ್ನು ಕಂಡು ಕಿಚ್ಚ ಸುದೀಪ್ ಮೂಕವಿಸ್ಮಿತರಾಗಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಕಿಚ್ಚ ಸುದೀಪ್ ತಮ್ಮೆಲ್ಲಾ ಅಭಿಮಾನಿಗಳು ಹಾಗೂ ಚಿತ್ರರಂಗದ ಆತ್ಮೀಯರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕೆಳಗೆ ಕಾಣುವ ಲೈಕ ಬಟನ್ ಒತ್ತಿ .