ಸ್ಯಾಂಡಲ್ವುಡ್ನಲ್ಲಿ ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ. ಸಿನಿಮಾ ನೋಡಿದ ಎಲ್ಲರೂ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಕೆಜಿಎಫ್ 2 ನಂತರ ಮತ್ತೊಂದು ಬಿಗ್ ಸಿನಿಮಾ ಸ್ಯಾಂಡಲ್ವುಡ್ನಿಂದ ಹೊರಬಂದಿದೆ. ಅದರಲ್ಲಿಯೂ ಸುದೀಪ್ ಅವರ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದವರಿಗೆ ಭರ್ಜರಿ ಗಿಫ್ಟ್ ಸಿಕ್ಕಂತಾಗಿದೆ.
ವಿಶ್ವದಾದ್ಯಂತ ಕಿಚ್ಚನ ಅಭಿಮಾನಿಗಳು ಸಿನಿಮಾ ನೋಡಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ (Social Media) ಈ ಸಿನಿಮಾ ಬಗ್ಗೆ ಈಗಾಗಲೇ ರಿವ್ಯೂ ಓಡಾಡುತ್ತಿದೆ. ಕಿಚ್ಚನ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇದರ ನಡುವೆ ವಿಕ್ರಾಂತ್ ರೋಣ ಸಿನಿಮಾವು ಕೆಜಿಎಫ್ 2 ಚಿತ್ರದ ದಾಖಲೆಯೊಂದನ್ನು ಬಿಡುಗಡೆ ಆದ ಮೊದಲ ದಿನವೇ ಮುರಿದು ಹಾಕಿದೆ.
ನಟ ಸುದೀಪ್ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕರು ಮತ್ತು ಆರ್ಟ್ ಡೈರೆಕ್ಟರ್ ಕುರಿತು ಮಾತನಾಡಿದ್ದಾರೆ. ಅದರಲ್ಲಿ ಅವರ ಬಗ್ಗೆ ಮೆಚ್ಚುಗೆ ಮಾತುಗಳು ಆಡಿದ್ದಾರೆ. ನಿರ್ಮಾಪಕ ಮಂಜು ಗಟ್ಟಿ ಗುಂಡಿಗೆ ಇರುವ ಮನುಷ್ಯ ಎಂದಿದ್ದಾರೆ. ಅವರು ಅತ್ಯಂತ ಧೈರ್ಯವಂತರು ಮತ್ತು ಅವರು ನನ್ನ ಸ್ನೇಹಿತರು ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ ಎಂದಿದ್ದಾರೆ.
ಇನ್ನು ಆರ್ಟ್ ಡೈರೆಕ್ಟಾರ್ ಶಿವಕುಮಾರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ಅವರು ಅತ್ಯಂತ ಪ್ರತಿಭೆ ಇರುವ ವ್ಯಕ್ತಿ ಎಂದಿದ್ದಾರೆ. ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಚಿತ್ರವನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. 3ಡಿಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’. ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಸಿನಿಮಾ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಔಟ್ ಅಂಡ್ ಔಟ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಇದರಲ್ಲಿರುವ ವಿಶುವಲ್ ಎಫೆಕ್ಟ್ಸ್, ಸೆಟ್ ಮತ್ತು ಕ್ಯಾಮರಾ ವರ್ಕ್ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ.
ಬಹುತೇಕ ಕಥೆ ಕಾಡಿನಲ್ಲೇ ಸಾಗುವ ಈ ಸಿನಿಮಾ ನಟ ಕಿಚ್ಚ ಸುದೀಪ್ ಈವರೆಗೂ ಮಾಡಿರುವ ಸಿನಿಮಾಗಳಿಗಿಂತ ಭಿನ್ನವಾಗಿದೆ. ರೆಟ್ರೋ ಕಾಲದ ಕಥೆಯಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ವಿಕ್ರಾಂತ್ ರೋಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೈದರಾಬಾದ್‌ನಲ್ಲಿ ಬೃಹತ್ ಕಾಡಿನ ಸೆಟ್ ಹಾಕಲಾಗಿತ್ತು. ಹೈದರಾಬಾದ್, ಬೆಂಗಳೂರು, ಕೇರಳ ಭಾಗದಲ್ಲಿ ಈ ಸಿನಿಮಾದ ಶೂಟಿಂಗ್ ನಡೆದಿದೆ.
ಕೆಳಗೆ ಕಾಣುವ ಲೈಕ್ ಬಟನ್ ಒತ್ತಿ