ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಖ್ಯಾತಿ ಪಡೆದಿರುವ ನಟಿ ರಾಧಿಕಾ ಪಂಡಿತ್. ತಮ್ಮ ಉತ್ತಮ ಅಭಿನಯದ ಮೂಲಕ ನಟಿ ದೊಡ್ಡ ಮಟ್ಟದಲ್ಲಿ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಜೊತೆಗೆ ವಿವಾಹದ ಬಳಿಕ ನಟಿ ರಾಧಿಕಾ ಪಂಡಿತ್ ಸಿನಿಮಾಗಳಿಂದ ದೂರವಿರಬಹುದು, ಆದರೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟಿವ್ ಆಗಿರುತ್ತಾರೆ.
ತಮ್ಮ ಅಭಿಮಾನಿಗಳ ಜೊತೆ ನಟಿ ರಾಧಿಕಾ ಪಂಡಿತ್ ಸೋಷಿಯಲ್ ಮಿಡಿಯಾದ ಮುಖಾಂತರ ಸದಾ ಸಂಪರ್ಕದಲ್ಲಿ ಇದ್ದೆ ಇರುತ್ತಾರೆ. ತಮ್ಮ ಮಕ್ಕಳೊಂದಿಗೆ ಕಳೆದ ಮಧುರ ಕ್ಷಣಗಳನ್ನು ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತಾರೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಯಶ್ ಜೊತೆ ತಮ್ಮ ವಿದೇಶ ಪ್ರವಾಸ ಫೋಟೋಗಳನ್ನು ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡಿದ್ದರು. ಯಶ್ ಹಾಗೂ ರಾಧಿಕಾ ಅವರ ಸುಂದರ ಕ್ಷಣಗಳನ್ನು ನೋಡಿದ ಅಭಿಮಾನಿಗಳು ತಮ್ಮ ಸಂತಸವನ್ನು ಕಾಮೆಂಟ್ ಮಾಡುವ ಮೂಲಕ ವ್ಯಕ್ತ ಪಡಿಸಿದ್ದರು.
ಇನ್ನು ನಟಿ ರಾಧಿಕಾ ಅವರು ಮತ್ತೆ ಸಿನಿಮಾಗಳಲ್ಲಿ ನಟಿಸಬೇಕು ಎನ್ನುವ ತಮ್ಮ ಆಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದರು. ಇನ್ನು ಮೊನ್ನೆ ನಡೆದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಕುಟುಂಬದ ಜೊತೆ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ.
ಇನ್ನು ಈ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಈ ಫೋಟೋಗಳು ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಯಶ್ ಹಾಗೂ ರಾಧಿಕಾ ಮನೆಯಲ್ಲಿ ಪ್ರತಿ ಹಬ್ಬವನ್ನು ಆಚರಣೆ ಮಾಡುತ್ತಾರೆ.
ಅದರಂತೆ ನಟಿ ರಾಧಿಕಾ ಪಂಡಿತ್ ವರಮಹಾಲಕ್ಷ್ಮಿ ಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಆಚರಣೆ ಮಾಡಿ ಸಂಭ್ರಮಿಸಿದ್ದಾರೆ. ಇನ್ನು ಯಶ್ ಮಕ್ಕಳು ಐರಾ ಹಾಗೂ ಯಥರ್ವ್ ಹೊಸ ಬಟ್ಟೆಯಲ್ಲಿ ಸಕತ್ ಆಗಿ ಮಿಂಚಿದ್ದಾರೆ. ಮಕ್ಕಳ ಮುದ್ದು ನಗುವಿಗೆ ಯಶ್ ಹಾಗೂ ರಾಧಿಕಾ ಅಭಿಮಾನಿಗಳು ಫಿದಾ ಆಗಿದ್ದಾರೆ.
ರಾಧಿಕಾ ಪಂಡಿತ್ ಅವರು ತಮ್ಮ ಮನೆಯ ಹಬ್ಬದ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಂತೆ, ಫೋಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗಿದೆ.
ಇನ್ನು ನಟಿ ರಾಧಿಕಾ ಪಂಡಿತ್ ಅವರು ಮತ್ತೆ ಸಿನಿಮಾರಂಗಕ್ಕೆ ಕಮ್ ಬ್ಯಾಕ್ ಮಾಡಲಿ ಎನ್ನುವುದು ಅವರ ಅಭಿಮಾನಿಗಳ ಆಸೆ, ಆಗಾಗ ಈ ಬಗ್ಗೆ ವದಂತಿಗಳು ಸಹ ಸೋಷಿಯಲ್ ಮಿಡಿಯಾದಲ್ಲಿ ಹಬ್ಬುತ್ತಿರುತ್ತದೆ, ಆದರೆ ಈ ಬಗ್ಗೆ ನಟಿ ರಾಧಿಕಾ ಅವರು ಮಾತ್ರ ಯಾವುದೇ ಸ್ಪಷ್ಟನೆ ನೀಡಿಲ್ಲ.