ಹಲವಾರು ಮಂದಿ ಚಿಕ್ಕವಯಸ್ಸಿನಲ್ಲೇ ನಟನೆಯಲ್ಲಿ ಏನಾದರೂ ಸಾಧಿಸಬೇಕು ಎಂದು ಸಾಕಷ್ಟು ಕನಸ್ಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಎಲ್ಲರಿಗೂ ಆ ಅವಕಾಶ ಸಿಗುವುದಿಲ್ಲ, ಇಂತಹವರಿಗೆ ಸೋಷಿಯಲ್ ಮಿಡಿಯಾ ಒಳ್ಳೆಯ ಪ್ಲಾಟ್ ಫಾರ್ಮ್ ಎಂದರೆ ತಪ್ಪಾಗುವುದಿಲ್ಲ.
ಸೋಷಿಯಲ್ ಮಿಡಿಯಾದಲ್ಲಿ ಟಿಕ್ ಟಾಕ್ ಅಥವಾ ರೀಲ್ಸ್ ಗಳನ್ನು ಮಾಡುತ್ತಾ ಅದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಂಡು ಕೆಲವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ಸ್ ಗಳನ್ನ ಸಂಪಾದಿಸಿಕೊಳ್ಳುತ್ತಾರೆ.
ಈ ರೀತಿ ಸೋಷಿಯಲ್ ಮಿಡಿಯಾದ ಮೂಲಕ ಜನಪ್ರಿಯತೆ ಪಡೆದುಕೊಂಡಿರುವವರ ಪೈಕಿ ಸೋನು ಶ್ರೀನಿವಾಸ್ ಗೌಡ ಕೂಡ ಒಬ್ಬರು. ಟಿಕ್ ಟಾಕ್ ಹಾಗೂ ರೀಲ್ಸ್ ಗಳನ್ನು ಮಾಡುತ್ತಾ ಸೋಷಿಯಲ್ ಮಿಡಿಯಾದ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ ಸೋನು ಶ್ರೀನಿವಾಸ್ ಗೌಡ.
ಸದಾ ಒಂದೆಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳ ಮೂಲಕ ಸಾಕಷ್ಟು ಟ್ರೋಲ್ ಆಗುತ್ತಿದ್ದ ಸೋನು ಶ್ರೀನಿವಾಸ್ ಗೌಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಇನ್ನು ಇತ್ತೀಚೆಗೆ ಸೋನು ಅವರ ಕಾಸಗಿ ವಿಡಿಯೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಹರಿಸಾಡುತ್ತಿತ್ತು.
ಇನ್ನು ಇಷ್ಟೆಲ್ಲಾ ಕಂಟ್ರಾವರ್ಸಿ ಮಾಡಿಕೊಂಡಿರುವ ಸೋನು ಶ್ರೀನಿವಾಸ್ ಗೌಡ, ಇದೀಗ ಕನ್ನಡದ ಬಿಗ್ ಬಾಸ್ ಓಟಿಟಿ ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಸೋನು ಅವರನ್ನು ಸ್ಪರ್ಧಿಯಾಗಿ ನೋಡಿ ಕೆಲವರು ಖುಷಿ ಪಟ್ಟರೆ, ಇನ್ನು ಕೆಲವರು ಈಕೆಯನ್ನು ಬಿಗ್ ಬಾಸ್ ಗೆ ಯಾಕೆ ಕರೆಸಿದ್ರಿ ಎಂದು ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಸಕತ್ ಟ್ರೋಲ್ ಮಾಡುತ್ತಿದ್ದಾರೆ.
ಇನ್ನು ಬಿಗ್ ಬಾಸ್ ಮನೆಯಲ್ಲಿ ಸೋನು ಶ್ರೀನಿವಾಸ್ ಗೌಡ ತಮ್ಮ ಆಟ ಹಾಗೂ ಇನ್ನಿತರ ಕಾರ್ಯಗಳ ಮೂಲಕ ಜನರ ಮನಸ್ಸಿನಲ್ಲಿ ತಮ್ಮ ಬಗ್ಗೆ ಇರುವ ಭಾವನೆಯನ್ನು ಅಂತ ಅಂತವಾಗಿ ಬದಲಾಯಿಸುವ ಪ್ರಯತ್ನದಲ್ಲಿದ್ದಾರೆ. ಇನ್ನು ಇದೀಗ ಸೋನು ಅವರ ಮತ್ತೊಂದು ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿದೆ.
ಸೋನು ಶ್ರೀನಿವಾಸ್ ಗೌಡ ಹಾಗೂ ಅವರ ತಾಯಿ ಜೊತೆಗಿನ ಒಂದು ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಕತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸೋನು ಅವರ ತಾಯಿಯ ಮುಗ್ದತೆ ಕಂಡು ನೆಟ್ಟಿಗರ ಮನಸ್ಸು ಕರಗಿದೆ. ಇನ್ನು ಅಮ್ಮ ಮಗಳು ಇಬ್ಬರೂ ಕೇಕ್ ಕಟ್ ಮಾಡುತ್ತಾ, ಆ ಕ್ಷಣವನ್ನು ಎಂಜಾಯ್ ಮಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ತಿಳಿಸಿ.